Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

02 July 2010

ವಿದ್ಯಾರಂಗ ಉದ್ಘಾಟನೆ

‘ಸಾಹಿತ್ಯ ಎಂದರೆ ಸಾಗರದಂತೆ ವಿಶಾಲವಾದುದು. ಸಾಹಿತ್ಯ ವೇದಿಕೆ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಹೊರತರುವ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಇದನ್ನು ಪೋಷಿಸಿ ಬೆಳೆಸಬೇಕು.’ ಎಂದು ಹಿರಿಯ ಸಾಹಿತಿ ವಿ.ಬಿ.ಕುಳಮರ್ವ ಅಭಿಪ್ರಾಯಪಟ್ಟರು. ಅವರು ೦೨.೦೭.೨೦೧೦ ಶುಕ್ರವಾರ ನಮ್ಮ ಶಾಲಾ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅಧ್ಯಾಪಕರಾದ ಎಸ್.ವಿ.ಭಟ್, ವಾಣಿ.ಪಿ.ಎಸ್ ಶುಭಾಶಂಸನೆಗೈದರು. ವಿದ್ಯಾರ್ಥಿ ವಿನೀತ್ ಶಂಕರ್.ಎಚ್ ಗತ ವರ್ಷದ ಚಟುವಟಿಕೆಗಳ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಶಾಂತಿ.ಕೆ ಸ್ವಾಗತಿಸಿ ಸುಬ್ರಹ್ಮಣ್ಯ ಪ್ರಸಾದ.ಕೆ ವಂದಿಸಿದರು. ವಿದ್ಯಾರ್ಥಿನಿ ರಂಜಿತಾ ಕಾರ್ಯಕ್ರಮ ನಿರೂಪಿಸಿದಳು. ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

No comments:

Post a Comment