Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

22 September 2012

ಚೈತನ್ಯ ಸಂರಕ್ಷಣೆ - ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ

ಕನ್ನಡ, ಮಲಯಾಳ ಮತ್ತು ಆಂಗ್ಲ ಭಾಷಾ ವಿದ್ಯಾರ್ಥಿಗಳನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ಸ್ಪರ್ಧೆ ನಡೆಸುವ ಕ್ರಮ ತೀರಾ ಸರಿಯಲ್ಲ. ಯಾಕೆಂದರೆ ವಿವಿಧ ಭಾಷೆಗಳನ್ನು, ಶೈಲಿಯನ್ನು ಒಂದೇ ತಕ್ಕ್ಡಿಯಲ್ಲಿ ಇರಿಸಿ ತೂಗುವುದು ಸುಲಭವಲ್ಲ, ಹಾಗೂ ಅನೇಕ ಸಂದರ್ಭದಲ್ಲಿ ಬಹುಮಾನ ಮಲಯಾಳಿ ಪ್ರಾಬಲ್ಯಕ್ಕೆ ಒಳಗಾಗುತ್ತದೆ. ಈ ರೀತಿಯ ಪ್ರಸಂಗಗಳು ನಮ್ಮ ಕಾಸರಗೋಡಿನಲ್ಲಿ ಪದೇ ಪದೇ ಎದುರಾಗುತ್ತದೆ. ಆದರೆ ಮೊನ್ನೆ 20.09.2012 ಗುರುವಾರದಂದು ಬಹುಮಾನ ನಮ್ಮ ಕನ್ನಡದ ಪಾಲಿಗೆ ಒಲಿಯಿತು. ಕೇರಳ ಸರಕಾರದ ಕ್ರೀಡಾ ಮತ್ತು ಯುವಜನ ಖಾತೆಯು ‘ಚೈತನ್ಯ ಸಂರಕ್ಷಣೆ’ಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಳ್ಳೇರಿಯಾ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ಕ್ಷಮಾದೇವಿ.ಕೆ ಕನ್ನಡದಲ್ಲಿ ಮಾತನಾಡಿ ಪ್ರಥಮ ಬಹುಮಾನ ‘ಸೈಕಲ್’ ಪಡೆದುಕೊಂಡಳು. ಬೇಳ ಕುಮಾರಮಂಗಲ ನಿವಾಸಿ ಬಾಲಕೃಷ್ಣಮೂರ್ತಿ ಮತ್ತು ಸತ್ಯಶೀಲಾ ಇವರ ಪುತ್ರಿಯಾದ ಈಕೆಗೆ ನಮ್ಮ ಶುಭ ಹಾರೈಕೆಗಳು.

2 comments:

  1. ಕನ್ನಡ ಭಾಷೆಯಲ್ಲಿ ಎಲ್ಲಾ ಇದೆ. ಅದಕ್ಕೇ ಅದರ ಮುಡಿಗೆ ಯಾವ ಭಾಷೆಗೂ ದಕ್ಕದ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿರುವುದು. ಇದು ಯಾವುದೇ ಭಾಷೆಯವರು ಹೊಟ್ಟೆ ಕಿಚ್ಚು ಪಡುವ ವಿಷಯ. ಆದರೆ ನಮ್ಮ ಕನ್ನಡಿಗರಿಗೇಕೆ ಭಾಷೆಯ ಬಗ್ಗೆ ಕ್ಷುಲ್ಲಕ ಭಾವನೆ ಮತ್ತು ಕೀಳರಿಮೆ ಇದೆಯೋ ಗೊತ್ತಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮಲಯಾಳಿಗಳು ಕನ್ನಡದ ಬಗ್ಗೆ ಮಲತಾಯಿ ಧೋರಣೆ ತೋರಿಸುತ್ತಿರುವ ಪರಿಸರದಲ್ಲಿ ಕನ್ನಡದ ಹೆಣ್ಣುಮಗಳೊಬ್ಬಳು ಜಿಲ್ಲಾ ಮಟ್ಟದ ಭಾಷಣದಲ್ಲಿ ಪ್ರಥಮ ಬಹುಮಾನ ಗೆಲ್ಲುತ್ತಾಳೆಂದರೆ ಅದು ನಿಜಕ್ಕೂ ಶ್ಲಾಘನೀಯ ವಿಚಾರ. ಆ ಬಹುಮಾನವನ್ನು ಗೆದ್ದ ನಿಮ್ಮ ಶಾಲೆಯ ವಿದ್ಯಾರ್ಥಿನಿ ಕ್ಷಮಾದೇವಿಯವರಿಗೆ ಕನ್ನಡಿಗರೆಲ್ಲರ ಶುಭಹಾರೈಕೆಗಳು.

    ReplyDelete