Flash

Flash: ಸಿದ್ಧವಾಗುತ್ತಿದೆ ತರಕಾರಿ ತೋಟ...

19 August 2013

ಶತಮಾನೋತ್ಸವ ಕಟ್ಟಡ ಶಿಲಾನ್ಯಾಸ

   “ಸೂರ್ಯನ ಚಲನೆಗೆ ಸಂಬಂಧಿಸಿ ಕಟ್ಟಡ ನಿರ್ಮಾಣದ ಆರಂಭಕ್ಕೆ ಇಂದಿನ ಗ್ರಹಗತಿ ಅತ್ಯಂತ ಸೂಕ್ತ. ಇಂತಹ ಉತ್ತಮವಾದ ಘಳಿಗೆಯಲ್ಲಿ ನನ್ನ ಮಾತೃಶಾಲೆಯ ಶತಮಾನೋತ್ಸವಕ್ಕೆ ಸಂಬಂಧಿಸಿದ ಕಟ್ಟಡದ ಶಿಲಾನ್ಯಾಸ ನೆರವೇರಿಸುತ್ತಿರುವುದು ಸಂತೃಪ್ತಿ ತಂದಿದೆ. ಉತ್ತಮ ಮುಹೂರ್ತದಲ್ಲಿ ಆರಂಭವಾದ ಈ ಕಟ್ಟಡದ ನಿರ್ಮಾಣ ಅತ್ಯಂತ ವೇಗವಾಗಿ ಮುಂದುವರಿಯಲಿ" ಎಂದು ಖ್ಯಾತ ಜ್ಯೋತಿಷಿ ಬೇಳ ಪದ್ಮನಾಭ ಶರ್ಮ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಮಹಾಜನ ವಿದ್ಯಾಸಂಸ್ಥೆಗಳಲ್ಲಿ ಜರಗಿದ ಶತಮಾನೋತ್ಸವ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡುತ್ತಿದ್ದರು.ಶತಮಾನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಐ.ವಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕದ ಉದ್ಯಮಿ ಬಿ.ವಸಂತ ಪೈ ದೇಣಿಗೆ ಸಂಗ್ರಹಣೆಗೆ ಚಾಲನೆ ನೀಡಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಸೌಮ್ಯಾ ಮಹೇಶ್, ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು, ಮಹಾಜನ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಡಾ|ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಸ್ವಾಗತಿಸಿ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಧನ್ಯವಾದ ಸಮರ್ಪಿಸಿದರು. ಶಾಲಾ ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಚ್.ಶಿವಕುಮಾರ ಕಾರ್ಯಕ್ರಮ ನಿರೂಪಿಸಿದರು.

1 comment: