12 December 2014
ಸಾಕ್ಷರ 2014 - ಸಮಾರೋಪ
``ಅಧ್ಯಾಪಕರು
ಹೇಳಿದ ವಿಷಯಗಳನ್ನು ವಿದ್ಯಾರ್ಥಿಗಳು
ಶ್ರದ್ಧೆಯಿಂದ ಕಲಿತು ಉತ್ತಮ
ಪ್ರಜೆಯಾಗಿ ಬಾಳಿ" ಎಂದು ರಕ್ಷಕ ಶಿಕ್ಷಕ ಸಂಘದ
ಅಧ್ಯಕ್ಷರಾದ ಶ್ರೀ ಅಪ್ಪಣ್ಣ
ಸೀತಂಗೋಳಿ ನುಡಿದರು. ಅವರು ನಮ್ಮ ಶಾಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಜರಗುತ್ತಿದ್ದ ಸಾಕ್ಷರ ತರಗತಿಯ ಸಮಾರೋಪ ಸಮಾರಂಭವನ್ನು ಕಳೆದ ವಾರ ನಿರ್ವಹಿಸಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಮಕ್ಕಳು ತಮ್ಮ ವಿವಿಧ ರೀತಿಯ ಪ್ರತಿಭೆಗಳನ್ನು ಪ್ರದರ್ಶಿಸಿದರು. ಹಿರಿಯ ಅಧ್ಯಾಪಕರಾದ ಶ್ರೀ ವೆಂಕಟರಾಜ ಸಿ. ಯಚ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಕೋರಿದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಭೆಯಲ್ಲಿ ಹಿರಿಯ ಅಧ್ಯಾಪಿಕೆ ಶ್ರೀಮತಿ ಮೀನಾಕ್ಷಿ ಯಚ್.ಯನ್ ಸ್ವಾಗತಿಸಿ, ಶ್ರೀಮತಿ ಶೈಲಜಾ. ಎ ಟೀಚರ್ ವಂದಿಸಿದರು. ಶ್ರೀಯುತ ಶಿವಕುಮಾರ. ಯಚ್ ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಸಂದರ್ಭದಲ್ಲಿ ಮಕ್ಕಳು ತಮ್ಮ ವಿವಿಧ ರೀತಿಯ ಪ್ರತಿಭೆಗಳನ್ನು ಪ್ರದರ್ಶಿಸಿದರು. ಹಿರಿಯ ಅಧ್ಯಾಪಕರಾದ ಶ್ರೀ ವೆಂಕಟರಾಜ ಸಿ. ಯಚ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಕೋರಿದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಭೆಯಲ್ಲಿ ಹಿರಿಯ ಅಧ್ಯಾಪಿಕೆ ಶ್ರೀಮತಿ ಮೀನಾಕ್ಷಿ ಯಚ್.ಯನ್ ಸ್ವಾಗತಿಸಿ, ಶ್ರೀಮತಿ ಶೈಲಜಾ. ಎ ಟೀಚರ್ ವಂದಿಸಿದರು. ಶ್ರೀಯುತ ಶಿವಕುಮಾರ. ಯಚ್ ಕಾರ್ಯಕ್ರಮವನ್ನು ನಿರೂಪಿಸಿದರು.
ಸ್ವಾಗತ ರೈ. ಬಿ - ಜಿಲ್ಲಾ ಮಟ್ಟಕ್ಕೆ ಆಯ್ಕೆ.
ಬೆಳ್ಳೂರಿನಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಇಂಗ್ಲಿಷ್ ಉಪನ್ಯಾಸ, ಇಂಗ್ಲಿಷ್ ಕಂಠಪಾಠ ಮತ್ತು ಕನ್ನಡ ಭಾಷಣ ಸ್ಪರ್ಧೆಗಳಲ್ಲಿ ‘ಎ’ಗ್ರೇಡ್ ಮತ್ತು ಪ್ರಥಮ ಸ್ಥಾನ ಪಡೆದ ಸ್ವಾಗತ ರೈ. ಬಿ. ಚೆರ್ವತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾಳೆ. ಈಕೆ ನಮ್ಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಮತ್ತು ಶಿಕ್ಷಕ ದಂಪತಿಗಳಾದ ಸೀತಾಂಗೋಳಿ ನಿವಾಸಿ ಚಂದ್ರಶೇಖರ ರೈ ಮತ್ತು ಚಂದ್ರಾವತಿ.ಬಿ ಇವರ ಪುತ್ರಿ.
19 November 2014
ವಿಜ್ಞಾನ ಮೇಳದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
17.11.2014 ಸೋಮವಾರ ನಾಯಮ್ಮಾರಮೂಲೆಯಲ್ಲಿ ಜರಗಿದ ಕಾಸರಗೋಡು ಜಿಲ್ಲಾ ವಿಜ್ಞಾನ ಮೇಳದಲ್ಲಿ ನಮ್ಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಸ್ವಾಗತ ರೈ. ಬಿ (ಶಿಕ್ಷಕ ದಂಪತಿಗಳಾದ ಚಂದ್ರಶೇಖರ ರೈ ಮತ್ತು ಚಂದ್ರಾವತಿ.ಬಿ ಇವರ ಪುತ್ರಿ) ಮತ್ತು ಒಂಭತ್ತನೇ ತರಗತಿ ವಿದ್ಯಾರ್ಥಿನಿ ನಿಸರ್ಗ.ಕೆ (ಕೇಶವಪ್ರಸಾದ್ ಕೊಡ್ವಕೆರೆ - ಭಾರತಿ. ಎಂ.ಜಿ ಇವರ ಪುತ್ರಿ) ಪ್ರದರ್ಶಿಸಿದ ಸ್ಥಿರ ಮಾದರಿಯು ‘ಎ’ ಗ್ರೇಡ್ ಸಹಿತ ಪ್ರಥಮ ಬಹುಮಾನ ಗಳಿಸಿ ನವೆಂಬರ್ 26ರಿಂದ 30ರ ತನಕ ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ಜರಗಲಿರುವ ರಾಜ್ಯ ಮಟ್ಟದ ವಿಜ್ಞಾನ ಮೇಳ ಸ್ಪರ್ಧೆಗೆ ಆಯ್ಕೆಯಾಗಿದೆ. ಬಹುಮಾನ ವಿಜೇತರಿಗೆ ಶುಭಾಶಯಗಳು...
14 November 2014
ರಕ್ಷಕರ ಸಮ್ಮೇಳನ 2014
“ವಿದ್ಯಾರ್ಥಿಗಳ ಪ್ರಗತಿಗೆ ರಕ್ಷಕರು ಮತ್ತು ಶಿಕ್ಷಕರ ಹೊಂದಾಣಿಕೆ ಅಗತ್ಯ. ಸೌಹಾರ್ದಯುತ ವಾತಾವರಣವಿರುವ ಮನೆಗಳಲ್ಲಿ ಬೆಳೆದ ಮಕ್ಕಳು ಉತ್ತಮ ನಾಗರಿಕರಾಗಿ ಬೆಳಗುತ್ತಾರೆ. ಆ ರೀತಿಯ ಸುಸಂಸ್ಕೃತ ವಾತಾವರಣವಿರುವ ಮನೆ ಮನಗಳನ್ನು ರೂಪಿಸಲು ನಾವು ಪ್ರಯತ್ನಿಸಬೇಕು ಎಂದು ನಮ್ಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಅಭಿಪ್ರಾಯಪಟ್ಟರು. ಅವರು ಸರ್ವಶಿಕ್ಷಾ ಅಭಿಯಾನದ ಅಂಗವಾಗಿ ಇಂದು ನಮ್ಮ ಶಾಲೆಯಲ್ಲಿ ಜರಗಿದ ರಕ್ಷಕರ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಹಿರಿಯ ಶಿಕ್ಷಕಿ ಎ.ಭುವನೇಶ್ವರಿಯವರು ಮಕ್ಕಳಲ್ಲಿ ವಿನಯ ವಿಧೇಯತೆಗಳನ್ನು ಬೆಳೆಸುವಲ್ಲಿ ಮಾತೆಯರ ಪಾತ್ರವು ಮಹತ್ತರವಾದುದು. ಎಲ್ಲ ಮಾತೆಯರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯ ಎಚ್.ಸೂರ್ಯನಾರಾಯಣ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಶೈಲಜಾ.ಎ ಮತ್ತು ವೇಣುಗೋಪಾಲಕೃಷ್ಣ.ಇ ರಕ್ಷಕರಿಗೆ ತರಗತಿ ನಡೆಸಿಕೊಟ್ಟರು. ಹಿರಿಯ ಶಿಕ್ಷಕಿ ಮೀನಾಕ್ಷಿ.ಎಚ್.ಎನ್ ಸ್ವಾಗತಿಸಿ ಮಾಲತಿ.ಪಿ ವಂದಿಸಿದರು. ಈ ಸಂದರ್ಭದಲ್ಲಿ ಬದಿಯಡ್ಕ ಗ್ರಾಮ ಪಂಚಾಯತು ಬಿಡುಗಡೆಗೊಳಿಸಿದ ಡೈರಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
13 November 2014
ಅಧ್ಯಾಪಕ ಹುದ್ದೆಗೆ ಸಂದರ್ಶನ
ನಮ್ಮ ಶಾಲೆಯ ಪ್ರೌಢಶಾಲಾ ವಿಭಾಗದ ನ್ಯಾಚುರಲ್ ಸಯನ್ಸ್(ವಿಜ್ಞಾನ ಪದವಿ, ಬಿ.ಎಡ್) ಮತ್ತು ಹೈಯರ್ ಸೆಕೆಂಡರಿ ವಿಭಾಗದ ರಸಾಯನ ಶಾಸ್ತ್ರ (ರಸಾಯನ ಶಾಸ್ತ್ರ ಸ್ನಾತಕೋತ್ತರ ಪದವಿ, ಬಿ.ಎಡ್ ಮತ್ತು ಸೆಟ್ ಅಥವಾ ನೆಟ್) ಶಿಕ್ಷಕರ ಆಯ್ಕೆಗಾಗಿ 17.11.2014 ಸೋಮವಾರ ಬೆಳಗ್ಗೆ 10.30ಕ್ಕೆ ಶಾಲೆಯಲ್ಲಿ ಸಂದರ್ಶನ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಸಕಾಲದಲ್ಲಿ ಹಾಜರಿರಬೇಕಾಗಿ ವಿನಂತಿ. ಹೆಚ್ಚಿನ ವಿವರಗಳಿಗಾಗಿ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ (9446283131, 9846575909) ಇವರನ್ನು ಸಂಪರ್ಕಿಸಬಹುದು.
08 November 2014
ನಮ್ಮ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್
ದಿನಾಂಕ 05.11.2014 ಬುಧವಾರದಿಂದ 07.11.2014 ಶುಕ್ರವಾರದ ತನಕ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್
ಸೆಕೆಂಡರಿ ಶಾಲಾ ಮೈದಾನದಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದ ಸಬ್
ಜ್ಯೂನಿಯರ್ ಮತ್ತು ಜ್ಯೂನಿಯರ್ ವಿಭಾಗಗಳಲ್ಲಿ ಅತ್ಯಧಿಕ ಅಂಕ ಸಹಿತ ಚಾಂಪಿಯನ್‌ಶಿಪ್
ಮತ್ತು ಒಟ್ಟು 14 ಚಿನ್ನ, 16 ಬೆಳ್ಳಿ, 7 ಕಂಚು ಪಡೆದು ಅತ್ಯಧಿಕ 132 ಅಂಕ ಸಂಪಾದಿಸಿ
ಶಾರೀರಿಕ ಶಿಕ್ಷಕ ಎಂ.ಸೂರ್ಯನಾರಾಯಣ ನೇತೃತ್ವದ ನಮ್ಮ ಶಾಲೆಯ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಸಹಕರಿಸಿದ ಎಲ್ಲರಿಗೆ ನಮ್ಮ ಶುಭಾಶಯಗಳು...
29 October 2014
08 October 2014
ಹಿರಿಯ ಶಿಕ್ಷಕ ಶ್ರೀ ಸಿ.ಎಚ್ ಸುಬ್ರಹ್ಮಣ್ಯ ಭಟ್ ವಿಧಿವಶ
ನಮ್ಮ ಶಾಲೆಯ ಹಿರಿಯ ಅಧ್ಯಾಪಕ,
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನಿವಾಸಿ ಚಾಲತ್ತಡ್ಕ ಸಿ.ಎಚ್. ಸುಬ್ರಹ್ಮಣ್ಯ ಭಟ್(52)
ಇಂದು 08.10.2014 ಬುಧವಾರ ಮುಂಜಾನೆ ನಿಧನರಾದರು. ಮೃತರು ಕಳೆದ 26 ವರ್ಷಗಳಿಂದ ನಮ್ಮ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕರಾಗಿ, ಪ್ರೌಢಶಾಲಾ ಗಣಿತ
ಅಧ್ಯಾಪಕರಾಗಿ, ಮತ್ತು ಕೆಲ ಕಾಲ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಕಾರ್ಯ
ನಿರ್ವಹಿಸಿದ್ದರು. ಇವರು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸಂಸ್ಕೃತ
ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಪತ್ನಿ ಉಮಾದೇವಿ, ಮಕ್ಕಳಾದ ಮೇಘಶ್ರೀ,
ಶ್ರೀವತ್ಸ ಮತ್ತು ಅಪಾರ ಬಂಧು ಮಿತ್ರರು, ಶಿಷ್ಯವರ್ಗವನ್ನು ಅಗಲಿದ್ದಾರೆ. ಅಕಾಲಿಕ
ನಿಧನದ ಪ್ರಯುಕ್ತ ಶಾಲೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಶಾಲೆಗೆ ರಜೆ ಸಾರಲಾಯಿತು. ಕಂಬನಿ....
19 September 2014
05 September 2014
01 September 2014
27 August 2014
ಹೈಯರ್ ಸೆಕೆಂಡರಿ ವಿಭಾಗ ಆರಂಭ
ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಮ ಪಂಚಾಯತು ಸ್ಥಾಯೀ ಸಮಿತಿ ಅಧ್ಯಕ್ಷ ಮಾಹಿನ್ ಕೇಳೋಟ್ ಮುಖ್ಯ ಅತಿಥಿಗಳಾಗಿದ್ದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯರಾದ ಸೌಮ್ಯಾ ಮಹೇಶ್, ಮಂಜುನಾಥ ಮಾನ್ಯ, ಗಂಗಾಧರ ಗೋಳಿಯಡ್ಕ, ಶೀಲಾ ಕೆ.ಎನ್. ಭಟ್, ಸಮಾಜ ಸೇವಕ ಅಬ್ದುಲ್ಲ ಮುಗು, ನೀರ್ಚಾಲು ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಬಾಲಸುಬ್ರಹ್ಮಣ್ಯ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಶಂಕರ ಸ್ವಾಮಿಕೃಪಾ ಶುಭ ಹಾರೈಸಿದರು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿ, ಪ್ರಭಾರ ಪ್ರಾಂಶುಪಾಲ ಎಚ್.ಸೂರ್ಯನಾರಾಯಣ ವಂದಿಸಿದರು. ಶಾಲಾ ಶಿಕ್ಷಕಿ ಶೈಲಜಾ.ಬಿ ಪ್ರಾರ್ಥಿಸಿದರು. ಶಾಲಾ ದೈಹಿಕ ಶಿಕ್ಷಣ ವಿಭಾಗದ ಶಿಕ್ಷಕ ಎಂ. ಸೂರ್ಯನಾರಾಯಣ ಕಾರ್ಯಕ್ರಮ ನಿರೂಪಿಸಿದರು.
22 August 2014
‘ಬ್ಲೆಂಡ್ - ಬ್ಲಾಗ್ ತಯಾರಿ ಮತ್ತು ತರಬೇತಿ’
ಶಾಲಾ ಹಿರಿಯ ಶಿಕ್ಷಕ ಸಿ.ಎಚ್. ವೆಂಕಟರಾಜ ಅಧ್ಯಕ್ಷತೆ
ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಕುಂಬಳೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅನಿಲ್
ಕುಮಾರ್ ಮತ್ತು ನಮ್ಮ ಶಾಲೆಯ ರವಿಶಂಕರ ದೊಡ್ಡಮಾಣಿ
ಉಪಸ್ಥಿತರಿದ್ದರು. ಮಾನ್ಯ ಜ್ಞಾನೋದಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸುರೇಂದ್ರನ್ ಸ್ವಾಗತಿಸಿ,
ಸೂರಂಬೈಲು ಸರಕಾರಿ
ಪ್ರೌಢಶಾಲೆಯ ಶಿಕ್ಷಕ ಇಸ್ಮಾಯಿಲ್ ಕೆ.ಎಂ ವಂದಿಸಿದರು. ಕುಂಟಿಕಾನ ಅನುದಾನಿತ ಹಿರಿಯ ಪ್ರಾಥಮಿಕ
ಶಾಲಾ ಶಿಕ್ಷಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.
ಹೈಯರ್ ಸೆಕೆಂಡರಿ - ಕನ್ನಡಕ್ಕೆ ಅನುಮತಿ
ಶತಮಾನೋತ್ಸವ ಸಂದರ್ಭದಲ್ಲಿ ಜನಪ್ರತಿನಿಧಿಗಳು ನೀಡಿದ ಆಶ್ವಾಸನೆಯಂತೆ ನೀರ್ಚಾಲು
ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಗೆ
ಹೈಯರ್ ಸೆಕೆಂಡರಿ ವಿಭಾಗವನ್ನು ತೆರೆಯಲು ಅನುಮತಿ ನೀಡಿ
ಕೇರಳ ಸರಕಾರ ಆದೇಶ ಹೊರಡಿಸಿದೆ.
ಈ ಮೊದಲು ನೀಡಿದ
ಆದೇಶದಲ್ಲಿ ಸರಕಾರವು ಭಾಷಾ ಕಲಿಕೆಗಾಗಿ
ಮಲಯಾಳವನ್ನು ಸೂಚಿಸಿತ್ತು. ಆದರೆ ವಿದ್ಯಾರ್ಥಿಗಳ, ಹಿತೈಷಿಗಳ
ಮತ್ತು ಶಾಲಾ ಆಡಳಿತ ಮಂಡಳಿಯ
ಬೇಡಿಕೆಯನ್ನು ಗಮನಿಸಿ 21.08.2014 ರಂದು
ಕೇರಳ ಸರಕಾರವು ಮಲಯಾಳದ ಬದಲು
ಕನ್ನಡ ತರಗತಿಗಳನ್ನು ಆರಂಭಿಸಲು ಸೂಚಿಸಿದೆ. ಈ ಆದೇಶದ ಪ್ರಕಾರ
ಇಂಗ್ಲಿಷ್, ಕನ್ನಡ ಭಾಷೆಗಳ ಹೊರತಾಗಿ
ವಿಜ್ಞಾನ ವಿಭಾಗದ ಭೌತಶಾಸ್ತ್ರ, ರಸಾಯನ
ಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ
(ಪಿಸಿಎಂಬಿ) ತರಗತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯಲ್ಲಿ
23.08.2014 ರಂದು ಅಪರಾಹ್ನ 4 ಗಂಟೆಯ
ಮೊದಲು ಶಾಲಾ ಕಛೇರಿಯಲ್ಲಿ ಅರ್ಜಿಗಳನ್ನು
ಸಮರ್ಪಿಸಬಹುದಾಗಿದೆ.
ಶಾಲೆಯ ಈ ಬೇಡಿಕೆಯನ್ನು
ಮನ್ನಿಸಿ ಹೈಯರ್ ಸೆಕೆಂಡರಿ ವಿಭಾಗವನ್ನು
ತೆರೆಯಲು ಮತ್ತು ಸೂಕ್ತ ಕೋರ್ಸುಗಳಿಗೆ
ಅನುಮತಿ ನೀಡಿ ಸರಕಾರವು ಆದೇಶವನ್ನು
ಹೊರಡಿಸಲು ಪ್ರಯತ್ನಿಸಿದ ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ನೆಲ್ಲಿಕುನ್ನು, ಬದಿಯಡ್ಕ ಗ್ರಾಮ ಪಂಚಾಯತು
ಅಧ್ಯಕ್ಷರು ಮತ್ತು ಸದಸ್ಯರು, ವಿವಿಧ
ಪಕ್ಷಗಳ ಪ್ರತಿನಿಧಿಗಳು ಮತ್ತು ಎಲ್ಲ ಹಿತೈಷಿಗಳಿಗೆ
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಕೃತಜ್ಞತೆ
ಸಲ್ಲಿಸಿದ್ದಾರೆ.
19 August 2014
17 August 2014
ಶ್ರೀಕೃಷ್ಣ ಜಯಂತಿ ಉತ್ಸವ - 2014
“ಕೃಷ್ಣ ಎಂದರೆ ಸೆಳೆತ, ಸಂಭ್ರಮ, ಸಂತೋಷ, ಆತ್ಮೀಯತೆ, ನಮ್ಮವನೆಂಬ ವ್ಯಾಮೋಹ. ಕೃಷ್ಣನ ಹೆಸರು ಅನುಪಮ ಆನಂದದ ಅನುಭವ. ಅವನ ವ್ಯಕ್ತಿತ್ವ ಅನುಪಮ, ಆದರ್ಶ. ಲೋಕಕಲ್ಯಾಣಕ್ಕಾಗಿ ಅವತಾರವೆತ್ತಿದ ಮಹಾಪುರುಷರ ಜನ್ಮದಿನದ ಆಚರಣೆ ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ತಂದುಕೊಡುತ್ತದೆ” ಎಂದು ನಿವೃತ್ತ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಅಭಿಪ್ರಾಯಪಟ್ಟರು. ಅವರು ಇಂದು ಪೆರಡಾಲ ಮಹಾಜನ ವಿದ್ಯಾಭಿವರ್ಧಕ ಸಂಘದ ‘ವಿದ್ಯೋದಯ ಸಭಾ’ ಆಶ್ರಯದಲ್ಲಿ ನಮ್ಮ ಶಾಲೆಯಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕಿರಿಯ ಪ್ರಾಥಮಿಕ ಶಾಲಾ
ಮುಖ್ಯೋಪಾಧ್ಯಾಯ ಪಿ. ಗೋವಿಂದ ಭಟ್ ಉಪಸ್ಥಿತರಿದ್ದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ವಿದ್ಯಾರ್ಥಿ ಉಪನಾಯಕಿ
ರಮ್ಯಾ.ಕೆ ವರದಿ ವಾಚಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯದೇವ ಖಂಡಿಗೆ ಸ್ವಾಗತಿಸಿ,
ಪ್ರೌಢಶಾಲಾ
ಮುಖ್ಯೋಪಾಧ್ಯಾಯ ಸಿ.ಎಚ್.ಸುಬ್ರಹ್ಮಣ್ಯ ಭಟ್ ವಂದಿಸಿದರು. ಕಾರ್ಯಕ್ರಮದ ಸಂಚಾಲಕಿ ವಾಣಿ.ಪಿ.ಎಸ್
ಕಾರ್ಯಕ್ರಮ ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ
ಅಂಗವಾಗಿ ಮೋಹನ ನೀರ್ಚಾಲು, ಗಣೇಶ್ ನೀರ್ಚಾಲು, ಮನಮೋಹನ ಸೂರಂಬೈಲು ಇವರಿಂದ ‘ಭಕ್ತಿಗಾನ ಸುಧಾ’ ಕಾರ್ಯಕ್ರಮ ಜರಗಿತು. ಹಾರ್ಮೋನಿಯಂನಲ್ಲಿ ಶಿವಾನಂದ ಮಾಯಿಪ್ಪಾಡಿ, ತಬ್ಲಾದಲ್ಲಿ ಅಚ್ಯುತಾನಂದ
ಕೂಡ್ಲು ಮತ್ತು ಮೌನೇಶ್ ನೀರ್ಚಾಲು ಸಹಕರಿಸಿದರು.
15 August 2014
11 August 2014
Subscribe to:
Posts (Atom)