Flash

Flash: ನಮ್ಮ ಶಾಲೆಯ 12 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

19 November 2015

ಕ್ರೀಡಾ ಜ್ಯೋತಿ ಬೆಳಗಿ ಕುಂಬಳೆ ಉಪಜಿಲ್ಲಾ ಕ್ರೀಡಾಕೂಟ ಆರಂಭಕುಂಬಳೆ ಉಪಜಿಲ್ಲಾ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ನವೆಂಬರ್ 19 ರಿಂದ 21 ರ ತನಕ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ನಡೆಯಲಿದೆ. 19.11.2015 ಗುರುವಾರ ಬೆಳಗ್ಗೆ 9 ಗಂಟೆಗೆ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ ಧ್ವಜಾರೋಹಣಗೈದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೀರ್ಚಾಲು ಶಾಲೆಯ ಹಳೆ ವಿದ್ಯಾರ್ಥಿ ಮತ್ತು ಪ್ರಸ್ತುತ ಅಂತಾರಾಷ್ಟ್ರೀಯ ಕ್ರೀಡಾಪಟು ವಿಶ್ವ.ಸಿ.ಎಚ್., ಮತ್ತು ಶಾಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ಬೆಳಗಿದರು.
ಎಲ್.ಪಿ ಮಿನಿ, ಎಲ್.ಪಿ ಕಿಡ್ಡೀಸ್, ಯು.ಪಿ ಕಿಡ್ಡೀಸ್, ಸಬ್ ಜ್ಯೂನಿಯರ್, ಜ್ಯೂನಿಯರ್ ಮತ್ತು ಸೀನಿಯರ್ ವಿಭಾಗಗಳಲ್ಲಿ ಹುಡುಗರು ಮತ್ತು ಹುಡುಗಿಯರಿಗೆ ಪ್ರತ್ಯೇಕವಾಗಿ ವಿವಿಧ ಸ್ಪರ್ಧೆಗಳು ನಡೆಯಲಿವೆ. ಕುಂಬಳೆ ಉಪಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟ 81 ಶಾಲೆಗಳಿಂದ ಸುಮಾರು 1700 ಮಂದಿ ಕ್ರೀಡಾಪಟುಗಳು ಮೂರು ದಿನ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ.

1 comment:

  1. ಕಾರ್ಯಕ್ರಮಗಳೆಲ್ಲವೂ ಅಡಚಣೆಗಳ್ಳಿಲ್ಲದೆ, ಸುಗಮವಾಗಿ ಸಾಗಲಿ....ಶುಭ ಹಾರೈಕೆಗಳು...

    ReplyDelete