Flash

Flash: ಸಿದ್ಧವಾಗುತ್ತಿದೆ ತರಕಾರಿ ತೋಟ...

03 February 2016

“ಚಟುವಟಿಕೆ ಆಧಾರಿತ ಕಲಿಕೆ ಅಗತ್ಯ” : ಮೈರ್ಕಳ ನಾರಾಯಣ ಭಟ್


“ತಲೆಮಾರುಗಳ ಹಿಂದಿನಿಂದಲೇ ಗುಣಮಟ್ಟದ ಶಿಕ್ಷಣವನ್ನು ನೀಡಿ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಹಾಜನ ಸಂಸ್ಥೆ ಮತ್ತೊಂದು ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಒಂದು ಕಾಲದಲ್ಲಿ ಸಂಸ್ಕೃತ ಮಹಾವಿದ್ಯಾಲಯವಾಗಿದ್ದ ಈ ಸಂಸ್ಥೆಯಲ್ಲಿ ಸುಸಜ್ಜಿತ ಗ್ರಂಥಾಲಯವಿದ್ದು ಇದರ ಉಪಯೋಗವನ್ನು ಅನೇಕ ಮಂದಿ ಪಡೆದುಕೊಳ್ಳುತ್ತಿದ್ದಾರೆ. ಚಟುವಟಿಕೆ ಆಧಾರಿತ ಕಲಿಕೆಯು ಪ್ರಸಕ್ತ ಕಾಲಘಟ್ಟದ ಅಗತ್ಯವಾಗಿರುವುದರಿಂದ ಈ ಸಂಸ್ಥೆಯಲ್ಲಿ ಅಂತಹ ಚಟುವಟಿಕೆಗಳಿಗೂ ವಿಶಾಲ ಅವಕಾಶಗಳು ದೊರೆಯುತ್ತಿರುವುದು ಸಂತಸದ ವಿಚಾರ” ಎಂದು ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ನಿವೃತ್ತ ಪ್ರಾಂಶುಪಾಲ ಮೈರ್ಕಳ ನಾರಾಯಣ ಭಟ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರಗಿದ ವರ್ಧಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಡಿ.ಶಂಕರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಮತ್ತು ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಜಯಾ.ಎಸ್ ಭಟ್ ಶುಭಹಾರೈಸಿದರು.

ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟರಾಜ.ಸಿ.ಎಚ್ ವರದಿ ವಾಚಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀದೇವಿ.ಕೆ ಕಾರ್ಯಕ್ರಮವನ್ನು ನಿರೂಪಿಸಿದರು.

No comments:

Post a Comment