Flash

Flash: ಸಿದ್ಧವಾಗುತ್ತಿದೆ ತರಕಾರಿ ತೋಟ...

25 January 2017

ಜನವರಿ 27 ರಂದು ಶಾಲಾ ವಾರ್ಷಿಕೋತ್ಸವ

ನಮ್ಮ ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕೋತ್ಸವವು 27.01.2017ನೇ ಶುಕ್ರವಾರ ಜರಗಲಿದೆ. ಬೆಳಗ್ಗೆ 9.30ಕ್ಕೆ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಧ್ವಜಾರೋಹಣಗೈಯುವರು. ನಂತರ ಜರಗುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧುರೈ ಕಾಮರಾಜ ವಿಶ್ವವಿದ್ಯಾನಿಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ| ಹರಿಕೃಷ್ಣ ಭರಣ್ಯ ನಿರ್ವಹಿಸಲಿದ್ದಾರೆ. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಡಿ.ಶಂಕರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಅಪ್ಪಣ್ಣ ಸೀತಾಂಗೋಳಿ, ಚಂದ್ರಹಾಸ ರೈ ಹಾಗೂ ಮಾತೃ ಸಂಘದ ಅಧ್ಯಕ್ಷೆಯರಾದ ಶ್ರೀಮತಿ ವಿಜಯಲಕ್ಷ್ಮಿ ಮತ್ತು ಶ್ರೀಮತಿ ರೇವತಿ ಶುಭಾಶಂಸನೆಗೈಯುವರು. ಅಪರಾಹ್ನ 1.30 ರಿಂದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಿದ್ದಾರೆ. ಅದೇ ದಿನ ಸಾಯಂಕಾಲ 4 ಗಂಟೆಗೆ ಮಹಾಜನ ಹಳೆವಿದ್ಯಾರ್ಥಿ ಸಂಘದ ಮಹಾಸಭೆ ಜರಗಲಿದೆ. ಎಲ್ಲರೂ ಬನ್ನಿ...

No comments:

Post a Comment