ಕುಂಬಳೆ ಉಪಜಿಲ್ಲಾ ಮಟ್ಟದ ಕೇರಳ ಶಾಲಾ ಒಲಿಂಪಿಕ್ಸ್ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಇಂದು ಅಕ್ಟೋಬರ್ 7 ಸೋಮವಾರ ಆರಂಭಗೊಂಡಿತು. ಇಂದು ಬೆಳಗ್ಗೆ 9.30 ಕ್ಕೆ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ.ಎಂ. ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ್ ಎಂ.ಕೆ. ಧನ್ಯವಾದ ಸಮರ್ಪಿಸಿದರು.
2024 ಅಕ್ಟೋಬರ್ 10 ರ ತನಕ ಶಾಲಾ ಮಕ್ಕಳ ವಿವಿಧ ಕ್ರೀಡಾ ಸ್ಪರ್ಧೆಗಳು ಶಾಲೆಯ ನೀರ್ಚಾಲು ಮತ್ತು ಮಲ್ಲಡ್ಕದ ಮೈದಾನದಲ್ಲಿ ಜರಗಲಿದೆ. ಅಕ್ಟೋಬರ್ 8 ರಂದು ಬೆಳಗ್ಗೆ ಕಾಸರಗೋಡು ವಿಧಾನ ಸಭಾ ಕ್ಷೇತ್ರದ ಶಾಸಕ ಎನ್.ಎ.ನೆಲ್ಲಿಕುನ್ನು ಅವರ ಅಧ್ಯಕ್ಷತೆಯಲ್ಲಿ ಜರಗುವ ಉದ್ಘಾಟನಾ ಸಮಾರಂಭದಲ್ಲಿ ಕಾಸರಗೋಡು ಲೋಕಸಭಾ ಕ್ಷೇತ್ರದ ಸಂಸದ ರಾಜಮೋಹನ್ ಉಣ್ಣಿತ್ತಾನ್ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದಾರೆ.
ಅಕ್ಟೋಬರ್ 10 ಗುರುವಾರ ಅಪರಾಹ್ನ ಸಮಾರೋಪ ಸಮಾರಂಭ ಜರಗಲಿದೆ.