ಕುಂಬಳೆ ಉಪಜಿಲ್ಲಾ ಕೇರಳ ಶಾಲಾ ಒಲಿಂಪಿಕ್ಸ್ ನೀರ್ಚಾಲ್ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಎಲ್.ಪಿ. ಶಾಲೆಯಲ್ಲಿ ಆರಂಭವಾಯಿತು. ಇಂದು ಅಕ್ಟೋಬರ್ 8 ರಂದು ಬೆಳಗ್ಗೆ 10.30 ಗಂಟೆಗೆ ಕಾಸರಗೋಡು ಲೋಕಸಭಾ ಕ್ಷೇತ್ರದ ಸಂಸದ ರಾಜಮೋಹನ್ ಉಣ್ಣಿತ್ತಾನ್ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟಿಸಿದರು. ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಾಂತಾ.ಬಿ. ಅಧ್ಯಕ್ಷತೆ ವಹಿಸಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಜಿಲ್ಲಾ ಪಂಚಾಯತು ಸದಸ್ಯೆ ಶೈಲಜಾ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಅಬ್ಬಾಸ್ ಎಂ., ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ., ಕಾಸರಗೋಡು ಬ್ಲೋಕ್ ಪಂಚಾಯತು ಸದಸ್ಯೆ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಜಯಶ್ರೀ ಪಿ., ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸುಕುಮಾರ ಕುದ್ರೆಪ್ಪಾಡಿ, ಬದಿಯಡ್ಕ ಗ್ರಾಮ ಪಂಚಾಯತು ಪಿ.ಇ.ಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್.ಕೆ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ., ಕುಂಬಳೆ ಉಪಜಿಲ್ಲಾ ಮಟ್ಟದ ವಿವಿಧ ಚಟುವಟಿಕೆಗಳ ಸಮಿತಿ ಸಂಚಾಲಕ ಸುರೇಂದ್ರನ್ ಎಂ.ವಿ., ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಶ್ಯಾಮಪ್ರಸಾದ್ ಮಾನ್ಯ, ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲೆ ಜಯಲಕ್ಷ್ಮಿ ಕೆ., ಬದಿಯಡ್ಕ ಆರೋಗ್ಯ ಸೇವಾ ಕೇಂದ್ರದ ಹೆಲ್ತ್ ಇನ್ಸ್ಪೆಕ್ಟರ್ ರಾಜೇಶ್, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಮಾಲತಿ ವೈ., ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಜಯಕುಮಾರ್ ಪಿ., ಕುಂಬಳೆ ಉಪಜಿಲ್ಲಾ ದೈಹಿಕ ಶಿಕ್ಷಣ ಸಂಘಟನೆಯ ಕಾರ್ಯದರ್ಶಿ ಸಂತೋಷ್ ಪಿ.ಎಚ್ ಶುಭಾಶಯಗಳನ್ನು ಹೇಳಿದರು.
ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ.ಎಂ. ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ ಎಂ.ಕೆ. ಧನ್ಯವಾದ ಸಮರ್ಪಿಸಿದರು.
ಅಕ್ಟೋಬರ್ 10, 2024 ರವರೆಗೆ ಶಾಲಾ ಮಕ್ಕಳ ವಿವಿಧ ಕ್ರೀಡಾ ಸ್ಪರ್ಧೆಗಳು ಶಾಲೆಯ ನೀರ್ಚಾಲ್ ಮತ್ತು ಮಲ್ಲಡ್ಕ ಮೈದಾನದಲ್ಲಿ ನಡೆಯಲಿದೆ. ಅಕ್ಟೋಬರ್ 10ರ ಗುರುವಾರ ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.
No comments:
Post a Comment