ಸ್ವತಂತ್ರ ಸಾಫ್ಟ್‌ವೇರ್ ದಿನಾಚರಣೆಯ ಅಂಗವಾಗಿ ಕಾಸರಗೋಡು ಜಿಲ್ಲಾ ಐಟಿ ಸ್ಕೂಲ್ ಆಶ್ರಯದಲ್ಲಿ ೨೪.೦೯.೨೦೦೯ ಗುರುವಾರ ಕಾಸರಗೋಡಿನಲ್ಲಿ ಜರಗಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ಶಾಂತಿ.ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಈಕೆ ಎಡನೀರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಕೆ. ಗಣೇಶ್ ಭಟ್ ಇವರ ಪುತ್ರಿ. ಕಾಸರಗೋಡು ನಗರಸಭಾ ಅಧ್ಯಕ್ಷೆ ಬೀಫಾತಿಮಾ ಇಬ್ರಾಹಿಂ ಪ್ರಶಸ್ತಿ ವಿತರಿಸಿದರು.
No comments:
Post a Comment