“ಕಳೆದ ಕೆಲವಾರು ವರ್ಷಗಳಿಂದ ಉತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿರುವ ಮಹಾಜನ ವಿದ್ಯಾಸಂಸ್ಥೆ ಈಗ ಶತಮಾನೋತ್ಸವ ವರ್ಷದ ಹೊಸ್ತಿಲಿನಲ್ಲಿದೆ. ಶತಮಾನೋತ್ಸವದ ಆಚರಣೆಗೆ ಇದು ಸ್ಪೂರ್ತಿ ನೀಡುತ್ತದೆ. ಶಾಲೆ ಮತ್ತು ವಿದ್ಯಾರ್ಥಿಗಳ ಪ್ರಗತಿಯಲ್ಲಿ ರಕ್ಷಕ ಶಿಕ್ಷಕ ಸಂಘದ ಪಾತ್ರ ಮಹತ್ತರವಾದದ್ದು” ಎಂದು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೆ.ಗೋಪಾಲಕೃಷ್ಣ ಭಟ್ ಅಭಿಪ್ರಾಯಪಟ್ಟರು. ಅವರು ೦೨.೦೭.೨೦೧೦ ಶುಕ್ರವಾರ ನಮ್ಮ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಅಬ್ಬಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಗತ ವರ್ಷದ ವರದಿ ವಾಚಿಸಿದರು. ಶಾಲಾ ಹಿರಿಯ ಸಂಸ್ಕೃತ ಅಧ್ಯಾಪಕ ಎಸ್.ವಿ.ಭಟ್ ಸ್ವಾಗತಿಸಿದರು. ಹಿರಿಯ ಅಧ್ಯಾಪಕ ಕೆ.ನಾರಾಯಣ ಭಟ್ ಧನ್ಯವಾದ ಸಮರ್ಪಿಸಿದರು.
No comments:
Post a Comment