Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 34 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

06 September 2010

ಶಿಕ್ಷಕರ ದಿನಾಚರಣೆ

“ಸಮಾಜಕ್ಕೆ ಶಿಕ್ಷಕರ ಮಹತ್ವವನ್ನು ಸಾರಿದ ಧೀಮಂತ ವ್ಯಕ್ತಿ ಡಾಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಕೊಂಡಾಡುವುದು ಅವರ ಜೀವನ ಸಂದೇಶವನ್ನು ಮೆಲುಕು ಹಾಕಲು ಉತ್ತಮ ಅವಕಾಶವನ್ನು ನೀಡುತ್ತದೆ. ಶಾಲೆಗಳಲ್ಲಿ ಶಿಕ್ಷಕರ ದಿನವನ್ನು ಆಚರಿಸಿಕೊಳ್ಳುವುದು ವಿದ್ಯಾರ್ಥಿಗಳಿಗೆ ಶಿಕ್ಷಕರನ್ನು ಗೌರವಿಸಲು ಅವಕಾಶವನ್ನು ಒದಗಿಸಿಕೊಡುತ್ತದೆ, ಆ ಮೂಲಕ ವಿದ್ಯಾರ್ಥಿಗಳಲ್ಲಿ ಗುರುಭಕ್ತಿ ಬೆಳೆಯುತ್ತದೆ" ಎಂದು ನಮ್ಮ ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಭಿಪ್ರಾಯಪಟ್ಟರು. ಅವರು ೦೬.೦೯.೨೦೧೦ ಸೋಮವಾರದಂದು ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶಿಕ್ಷಕರಾದ ಚಂದ್ರಶೇಖರ ರೈ ಮತ್ತು ಪರಮೇಶ್ವರಿ. ವೈ ವಿದ್ಯಾರ್ಥಿಗಳಿಗೆ ಶುಭಾಶಯ ಸಲ್ಲಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಸ್ವಾಗತಿಸಿದರು. ಶಿಕ್ಷಕಿ ಮಾಲತಿ.ಎಂ ವಂದಿಸಿದರು.

1 comment:

  1. ಎಲ್ಲಾ ಶಿಕ್ಶಕರಿಗೂ ಶುಭಾಶಯಗಳು.
    ನಾನು ಶಾಲೆಗೆ ಹೋಗುತ್ತಿದ್ದಾಗ, ನಮ್ಮ ಶಾಲಯಲ್ಲಿ, Sept.5ರಂದು,ಹಿರಿಯ ವಿದ್ಯಾರ್ಥಿಗಳು, ಕಿರಿಯರಿಗೆ ಹೇಳಿಕೊಡುವ ಸಂಪ್ರದಾಯ ಇತ್ತು. ಶಿಕ್ಶಕರಿಗೆ, ಆ ದಿನ break :)

    ReplyDelete