“ಕಾಸರಗೋಡು ಜಿಲ್ಲೆಯ ಕನ್ನಡ ವಿದ್ಯಾರ್ಥಿಗಳಲ್ಲಿ ಮಲಯಾಳದ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಉದ್ಯೋಗ ಕುರಿತಾದ ಮಾಹಿತಿ ಕಡಿಮೆ ಇದೆ. ಮಲಯಾಳದ ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವುದರ ಮೂಲಕ ಉದ್ಯೋಗಕ್ಕೆ ಅಗತ್ಯವಾದ ಕನಿಷ್ಟ ವಿದ್ಯಾಭ್ಯಾಸ ಕುರಿತಾದ ಮಾಹಿತಿಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಕನ್ನಡ ವಿದ್ಯಾರ್ಥಿಗಳಿಗೆ ಸಹಾಯಕವಾಗಬಲ್ಲ ಉದ್ಯೋಗ ಮಾಹಿತಿ ನೀಡುವದಕ್ಕೆಂದೇ ಮೀಸಲಾದ ಪತ್ರಿಕೆಗಳ ಕೊರತೆ ಇರುವುದರಿಂದ ಕನ್ನಡ ವಿದ್ಯಾರ್ಥಿಗಳು ಉತ್ತಮ ಅವಕಾಶದಿಂದ ವಂಚಿತರಾಗುತ್ತಿದ್ದಾರೆ" ಎಂದು ಕಾಸರಗೋಡು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿ ಯು.ಸುಕುಮಾರನ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಸಿದ “ಎಸ್.ಎಸ್.ಎಲ್.ಸಿ ನಂತರ ಮುಂದೇನು?" ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಹಿರಿಯ ಅಧ್ಯಾಪಕ ಕೆ.ಶಂಕರನಾರಾಯಣ ಶರ್ಮ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಸ್ಕೃತ ಅಧ್ಯಾಪಕ ಎಸ್.ವಿ.ಭಟ್ ಸ್ವಾಗತಿಸಿದರು. ಅಧ್ಯಾಪಕ ಟಿ.ಕೃಷ್ಣಪ್ರಸಾದ್ ವಂದಿಸಿದರು.
No comments:
Post a Comment