ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಉಪಸ್ಥಿತರಿದ್ದರು. ಶಾಲಾ ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
20 September 2011
ರಸ್ತೆ ಸುರಕ್ಷಾ ಜಾಗೃತಿ ಕಾರ್ಯಕ್ರಮ
“ಮಾನವನ ಜೀವ ಅತ್ಯಂತ ಅಮೂಲ್ಯವಾದುದು. ದಿನವೊಂದರಲ್ಲಿ ರಸ್ತೆ ಅಪಘಾತಗಳಿಂದಾಗಿ ಇಹಲೋಕವನ್ನು ತ್ಯಜಿಸುತ್ತಿರುವ, ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದವರನ್ನು ಗಮನಿಸುವಾಗ, ನಾವು ರಸ್ತೆ ನಿಯಮಗಳ ಬಗ್ಗೆ ಎಷ್ಟು ಜಾಗೃತರಾಗಿರಬೇಕೆಂಬುದು ಅರಿವಾಗುತ್ತದೆ. ರಸ್ತೆ ನಿಯಮಗಳು ಕೇವಲ ವಾಹನ ಚಾಲಕರಿಗೆ ಮಾತ್ರವಲ್ಲ, ಪಾದಚಾರಿಗಳಿಗೂ ಅನ್ವಯವಾಗುತ್ತದೆ. ರಸ್ತೆಯನ್ನು ದಾಟುವಾಗ ಎಡಬಲಗಳನ್ನು ಸ್ಪಷ್ಟವಾಗಿ ವೀಕ್ಷಿಸಿ, ಯಾವುದೇ ವಾಹನಗಳು ಸಂಚರಿಸುತ್ತಿಲ್ಲವೆಂಬುದನ್ನು ಗಮನಿಸಿಯೇ ದಾಟಬೇಕು. ದ್ವಿಚಕ್ರ ವಾಹನ ಚಾಲಕರು ಹೆಲ್ಮೆಟ್ ಧರಿಸಬೇಕು. ವಾಹನ ಸವಾರರು ಸಡಿಲವಾದ ಉಡುಪುಗಳನ್ನು ಧರಿಸಬಾರದು. ರಾತ್ರಿಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವವರಿಗೆ ಬಿಳಿ ಬಣ್ಣದ ಉಡುಪುಗಳು ಉತ್ತಮ. ಕಾರು, ಜೀಪು ಮುಂತಾದ ವಾಹನಗಳಲ್ಲಿ ಚಲಿಸುವವರು ಸೀಟ್ ಬೆಲ್ಟ್ ಧರಿಸಿಕೊಳ್ಳಬೇಕು” ಎಂದು ಕಾಸರಗೋಡು ಜಿಲ್ಲಾ ಅಸಿಸ್ಟೆಂಟ್ ಮೋಟಾರ್ ವೆಹಿಕಲ್ ಇನ್‌ಸ್ಪೆಕ್ಟರ್ ರಾಜೀವನ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ‘ರಸ್ತೆ ಸುರಕ್ಷಾ ಜಾಗೃತಿ ಕಾರ್ಯಕ್ರಮ’ದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮತ್ತು ಹೆತ್ತವರಿಗೆ ಸ್ಲೈಡ್ ಪ್ರದರ್ಶನದ ಮೂಲಕ ವಿವರಣೆಗಳನ್ನು ನೀಡುತ್ತಾ ಮಾತನಾಡುತ್ತಿದ್ದರು.
Subscribe to:
Post Comments (Atom)
No comments:
Post a Comment