ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂದು ನಮ್ಮ ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ನೀರ್ಚಾಲು ಪೇಟೆಯಲ್ಲಿ ಸ್ವಾತಂತ್ರ್ಯ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಮಾತನಾಡಿದರು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯ ಕಂಬಾರು, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಸ್ವಾಗತಿಸಿದರು. ಶಾಲಾ ಹಿರಿಯ ಶಿಕ್ಷಕಿ ಕೆ.ವಿನೋದಿನಿ ವಂದಿಸಿದರು. ಸಂಚಾಲಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment