“ಒಂದು ಧ್ಯೇಯ, ಲಾಂಛನದೊಂದಿಗೆ ವಿಶಾಲವಾದ ಚಪ್ಪರದಲ್ಲಿ ಉಪಜಿಲ್ಲಾ ಕಲೋತ್ಸವ ರಂಗೇರಲಿದೆ. ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸುವ ಈ ಕಲೋತ್ಸವಕ್ಕೆ ನಾವು ಸರ್ವರೀತಿಯಲ್ಲಿ ಸಜ್ಜುಗೊಳ್ಳಬೇಕಿದೆ. ಕಾಸರಗೋಡಿನ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಈ ಲಾಂಛನವು ಕಾರ್ಯಕ್ರಮವು ಯಶಸ್ವಿಯಾಗುವುದರ ಸಂಕೇತ'' ಎಂದು ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಅಕ್ಟೋಬರ್ 31ರಿಂದ ನವೆಂಬರ್ 4ರ ತನಕ ಜರಗಲಿರುವ 58ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಅಧ್ಯಕ್ಷತೆ ವಹಿಸಿದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಕಾರ್ಯಕ್ರಮ ಸಮಿತಿಯ ಉಪಾಧ್ಯಕ್ಷ ಬಾಲಚಂದ್ರ, ಲಾಂಛನವನ್ನು ರೂಪಿಸಿದ ವೇಣುಗೋಪಾಲ ಆರೋಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ. ಸಿ.ಎಚ್ ಸ್ವಾಗತಿಸಿದರು. ಶಿಕ್ಷಕ ಚಂದ್ರಶೇಖರ ರೈ ವಂದಿಸಿದರು. ಶಿಕ್ಷಕಿ ಶೈಲಜ.ಬಿ ಪ್ರಾರ್ಥಿಸಿದರು. ಕಾರ್ಯಕ್ರಮ ಸಮಿತಿ ಸಂಚಾಲಕ ಶಿವಪ್ರಕಾಶ್.ಎಂ.ಕೆ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment