Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 34 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

31 October 2017

ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ಚಾಲನೆ



ಗ್ರಾಮ್ಯ ವಾತಾವರಣದ ಪೆರಡಾಲದಿಂದ ಬೆಳೆಯುತ್ತಾ ಬಂದು ನೀರ್ಚಾಲಿಗೆ ಸೇರಿದ ನಮ್ಮ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಐದು ದಿನಗಳ ಕಾಲ ನಡೆಯಲಿರುವ 58ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ನೀರ್ಚಾಲು ಶೃಂಗಾರದಿಂದ ಸಜ್ಜುಗೊಂಡಿದೆ. ಆಕರ್ಷಕ ಸ್ವಾಗತ ಕಮಾನು, ವಿವಿಧ ವೇದಿಕೆಗಳು, ಚಪ್ಪರ ಸ್ಪರ್ಧಾಳುಗಳಿಗೆ ಆತಿಥ್ಯ ನೀಡಲು ಸಜ್ಜುಗೊಂಡಿವೆ. ಅಕ್ಟೋಬರ್ 31ರಂದು ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಶಂಕರ.ಡಿ, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸಮೂರ್ತಿ, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್.ಎಂ, ಸಂಘಟಕ ಸಮಿತಿಯ ಅಧ್ಯಕ್ಷ ಎಸ್.ನಾರಾಯಣ, ಕುಂಬಳೆ ಉಪಜಿಲ್ಲಾ ಹೆಡ್ ಮಾಸ್ಟರ್ಸ್ ಫೋರಂ ನ ಸಂಚಾಲಕ ವಿಷ್ಣುಪಾಲ.ಬಿ,   ನಿವೃತ್ತ ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ ಶರ್ಮ, ನಿವೃತ್ತ ಉಪನ್ಯಾಸಕ ಪ್ರೊ|ಶ್ರೀನಾಥ್, ಕೃಷ್ಣ ಮಣಿಯಾಣಿ ಮೊಳೆಯಾರು, ಬಾಲಗೋಪಾಲ ಏಣಿಯರ್ಪು ಮತ್ತಿತರರು ಉಪಸ್ಥಿತರಿದ್ದರು. ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟರಾಜ ಸಿ.ಎಚ್. ಸ್ವಾಗತಿಸಿದರು. ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ವಂದಿಸಿದರು.

26 October 2017

ಕಲೋತ್ಸವದ ಆಮಂತ್ರಣ ಪತ್ರಿಕೆ...

ನಮ್ಮ ಶಾಲೆಯಲ್ಲಿ ಜರಗಲಿರುವ ಶಾಲಾ ಕಲೋತ್ಸವದ ಆಮಂತ್ರಣ ಪತ್ರಿಕೆ ಸಿದ್ಧವಾಗಿದೆ. ನೀವೆಲ್ಲರೂ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ...


24 October 2017

ಕಲೋತ್ಸವ_ಚಪ್ಪರ ಮುಹೂರ್ತ


ನಮ್ಮ ಶಾಲೆಗಳಲ್ಲಿ 2017 ಅಕ್ಟೋಬರ್ 31 ರಿಂದ ನವೆಂಬರ್ 4ರ ತನಕ ಜರಗಲಿರುವ ಕುಂಬಳೆ ಉಪಜಿಲ್ಲಾ ಕಲೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ಇಂದು ಜರಗಿತು. ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಮತ್ತು ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಮುಹೂರ್ತ ನೆರವೇರಿಸಿದರು.

ಅಕ್ಟೋಬರ್ 26 ರಂದು ಹಳೆ ವಿದ್ಯಾರ್ಥಿ ಸಂಘದ ಸಭೆ

ನಮ್ಮ ಶಾಲೆಗಳಲ್ಲಿ 2017 ಅಕ್ಟೋಬರ್ 31 ರಿಂದ ನವೆಂಬರ್ 4ರ ತನಕ ಜರಗಲಿರುವ ಕುಂಬಳೆ ಉಪಜಿಲ್ಲಾ ಕಲೋತ್ಸವದ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿಗಳ, ಪರಿಸರದ ಸಂಘ ಸಂಸ್ಥೆಗಳ ಸಭೆಯನ್ನು 26.10.2017 ಗುರುವಾರ ಅಪರಾಹ್ನ 2.30 ಗಂಟೆಗೆ ಶಾಲಾ ಸಭಾಂಗಣದಲ್ಲಿ ಕರೆಯಲಾಗಿದೆ. ಶಾಲೆಯ ಹಳೆ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಈ ಸಭೆಯಲ್ಲಿ ಹಾಜರಿರಬೇಕಾಗಿ ಅಪೇಕ್ಷೆ.