ವಿದ್ಯಾರ್ಥಿಗಳಲ್ಲಿ ಕೃಷಿ ಆಸಕ್ತಿ ಮತ್ತು ನವೀನ ತಂತ್ರಜ್ಞಾನಗಳನ್ನು ಬಳಸಿ ಕೃಷಿ ವ್ಯವಸ್ಥೆಗಳನ್ನು ಹೆಚ್ಚು ಆಪ್ಯಾಯಮಾನಗೊಳಿಸುವ ನಿಟ್ಟಿನಲ್ಲಿ ಪರಿಚಯಾತ್ಮಕ ಸಂದರ್ಶನ ಚಟುವಟಿಕೆಗಳು ಅಗತ್ಯ ಎನ್ನುವುದನ್ನು ಗಮನದಲ್ಲಿರಿಸಿ ಶಾಲೆಗಳಲ್ಲಿ ಕೃಷಿ ಸಂದರ್ಶನ ಚಟುವಟಿಕೆ ಹಮ್ಮಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಗಳು ಇಂದು ಸಿ.ಪಿ.ಸಿ.ಆರ್.ಐ ಕಾಸರಗೋಡನ್ನು ಸಂದರ್ಶಿಸಿದರು.
ಸಿ.ಪಿ.ಸಿ.ಆರ್.ಐ ಯ ಹಿರಿಯ ತಾಂತ್ರಿಕ ಅಧಿಕಾರಿ ಮುರಳೀಕೃಷ್ಣ ಕಿಳಿಂಗಾರು ವಿದ್ಯಾರ್ಥಿಗಳಿಗೆ ಟಿಶ್ಯೂ ಕಲ್ಚರ್ ಕುರಿತು ಮತ್ತು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿ ಮಣಿಕಂಠನ್ ಕಸಿಕಟ್ಟುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಟಿಶ್ಯೂ ಕಲ್ಚರ್ ಮತ್ತು ಕಸಿಕಟ್ಟುವಿಕೆಯ ಸೂಕ್ಷ್ಮಗಳನ್ನು ತಿಳಿದುಕೊಳ್ಳಲು ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿ ತಮ್ಮ ಅರಿವಿನ ವಿಸ್ತಾರವನ್ನು ಹೆಚ್ಚಿಸಿಕೊಂಡರು. ಸಮರ್ಪಕ ಅರಿವಿನೊಂದಿಗೆ ಕೃಷಿ ವಿಭಾಗದ ಗಣನೀಯ ಸಾಧನೆಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈ ಸಂದರ್ಭ ಭರವಸೆಯ ನುಡಿಗಳನ್ನಾಡಿದರು. ಶಾಲಾ ಶಿಕ್ಷಕರಾದ ಗೋವಿಂದ ಶರ್ಮ.ಕೆ, ಜ್ಯೋತಿಲಕ್ಷ್ಮಿ.ಯಸ್, ಅವಿನಾಶ ಕಾರಂತ.ಯಂ, ಶೋಭಾ.ಕೆ.ಹಿರೇಮಠ್ ಮೊದಲಾದವರು ನೇತೃತ್ವ ನೀಡಿದರು.
No comments:
Post a Comment