Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 13 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

22 February 2019

ಸ್ಪಂದನ - 2019


“ಕಷ್ಟಗಳು ನಮ್ಮನ್ನು ಸದಾ ಕಾಡುತ್ತಿರುತ್ತವೆ. ಆದರೆ ನಾವು ಆ ಕಷ್ಟಗಳು ಎದುರಾದಾಗ ಧೃತಿಗೆಡಬಾರದು ಮತ್ತು ಇತರರ ಕಷ್ಟವನ್ನು ಅರಿತು ಅವರಿಗೆ ಸ್ಪಂದಿಸಿ ಸಹಾಯ ಮಾಡಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಕಿರಣ್ ಪ್ರಸಾದ್ ಕೂಡ್ಲು  ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ’ಸ್ಪಂದನ’ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಉದಾರ ದಾನಿಗಳ ಸಹಕಾರದಿಂದ ಅಶಕ್ತ ವಿದ್ಯಾರ್ಥಿಯ ಕುಟುಂಬಕ್ಕೆ ನೀಡಲು ಸಂಗ್ರಹಿಸಿದ ಮೊತ್ತವನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಂಬಳೆ ಲೋಕಲ್ ಅಸೋಸಿಯೇಷನ್ ಕಾರ್ಯದರ್ಶಿ ವಿಜಯ ಕುಮಾರ್, ಮಂಜೇಶ್ವರ ಲೋಕಲ್ ಅಸೋಸಿಯೇಷನ್ ಕಾರ್ಯದರ್ಶಿ ಶಿವಪ್ರಸಾದ್, ಕಾಸರಗೋಡು ಬುಲ್‌ಬುಲ್ ಹೆಡ್‌ಕ್ವಾರ್ಟರ್ಸ್ ನಾಯಕಿ ಶ್ರೀಮತಿ ಜ್ಯೋತಿಲಕ್ಷ್ಮಿ, ಮಂಜೇಶ್ವರ ಎಡಿಸಿ ಶ್ರೀಮತಿ ಶ್ರೀಕುಮಾರಿ, ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ, ಶಾಲಾ ಸ್ಕೌಟ್ ಅಧ್ಯಾಪಕರಾದ ಶಿವರಂಜನ್.ಪಿ.ಆರ್, ಅವಿನಾಶ ಕಾರಂತ.ಎಂ, ಗೈಡ್ಸ್ ಶಿಕ್ಷಕಿ ಶ್ರೀಮತಿ ಅನ್ನಪೂರ್ಣ.ಎಸ್  ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕಾರ್ತಿಕ ಕೃಷ್ಣ.ಕೆ ಸ್ವಾಗತಿಸಿ, ಅದಿತಿ.ಕೆ ವಂದಿಸಿದರು. ಪ್ರಗತಿ.ಕೆ ಕಾರ್ಯಕ್ರಮವನ್ನು ನಿರೂಪಿಸಿದರು.

No comments:

Post a Comment