Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 13 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

26 November 2022

ಕುಂಬಳೆ ಶಾಲಾ ಕಲೋತ್ಸವ - ನಮ್ಮ ಶಾಲೆಗೆ ಚಾಂಪಿಯನ್ ಪಟ್ಟ


ಇತ್ತೀಚೆಗೆ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದ ವಿವಿಧ ವಿಭಾಗಗಳಲ್ಲಿ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಪ್ರೌಢಶಾಲಾ ಸಂಸ್ಕೃತೋತ್ಸವದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಚಾಂಪಿಯನ್ ಪಟ್ಟ, ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕೃತೋತ್ಸವದಲ್ಲಿ ರನ್ನರ್ಸ್ ಅಪ್, ಕಲೋತ್ಸವ ಪ್ರೌಢಶಾಲಾ ವಿಭಾಗದ ರನ್ನರ್ಸ್ ಅಪ್ ಪ್ರಶಸ್ತಿಯನ್ನು ನೀರ್ಚಾಲು ಶಾಲೆಯ ವಿದ್ಯಾರ್ಥಿಗಳು ಗಳಿಸಿದ್ದಾರೆ. ಈ ಮೂಲಕ ಕಲೋತ್ಸವದ ವಿವಿಧ ವಿಭಾಗಗಳಲ್ಲಿ ಮೂರು ಟ್ರೋಫಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.No comments:

Post a Comment