15 June 2017
06 June 2017
ಶಾಲಾ ಸುರಕ್ಷಾ ಸಮಿತಿ
05 June 2017
ವಿಶ್ವಪರಿಸರ ದಿನಾಚರಣೆ
ಇಂದು ನಮ್ಮ ಶಾಲೆಯಲ್ಲಿ ಜರಗಿದ ವಿಶ್ವಪರಿಸರ ದಿನಾಚರಣೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಶಾಲಾ ಪರಿಸರದಲ್ಲಿ ಗಿಡವನ್ನು ನೆಟ್ಟು ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಿದರು. ಇಕೋ ಕ್ಲಬ್ ಸಂಚಾಲಕ ಶಿವಪ್ರಕಾಶ್.ಎಂ.ಕೆ, ಶಿಕ್ಷಕರಾದ ಗೋವಿಂದ ಶರ್ಮ.ಕೆ, ದೈಹಿಕ ಶಿಕ್ಷಣ ವಿಭಾಗದ ಶಿಕ್ಷಕ ಸಂತೋಷ್, ಹಿರಿಯ ಶಿಕ್ಷಕಿ ಅನ್ನಪೂರ್ಣ ಮತ್ತು ಸರಿತಾ. ಪಿ.ಎಸ್ ಉಪಸ್ಥಿತರಿದ್ದರು.
02 June 2017
01 June 2017
05 May 2017
ಹತ್ತನೇ ತರಗತಿ_ಉತ್ತಮ ಫಲಿತಾಂಶ
2016-17ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನಮ್ಮ ಶಾಲೆಯ ಹತ್ತು ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ. ನಮ್ಮ ಶಾಲೆಯ ಹತ್ತು ಡಿ ತರಗತಿಯ ಅನಿಶ.ಎನ್, ಅರ್ಚನ.ಜಿ, ಮಹಿಮ ಎಚ್.ಎನ್, ಮಂಜುಷ ಪಿ.ಎಸ್, ಸಂಪನ್ನ ಎಂ.ಎನ್, ಶ್ರೀಹರ್ಷ ಪ್ರಸಾದ್.ಎಸ್, ಚಿನ್ಮಯ ಭಟ್ ಕೆ.ಕೆ, ಶರಣ್ ಕುಮಾರ್ ಮತ್ತು ಹತ್ತು ಬಿ ತರಗತಿಯ ನಂದನ ಕೆ.ಎ, ಶ್ರೀಧ್ವಜ್.ಎ ಈ ಸಾಧನೆಯನ್ನು ಪ್ರದರ್ಶಿಸಿದ್ದಾರೆ. ನಮ್ಮ ಶಾಲೆಯಲ್ಲಿ 200 ಮಂದಿ ಪರೀಕ್ಷೆ ಬರೆದಿದ್ದು 196 ಮಂದಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿ ಶಾಲೆಗೆ 98% ಫಲಿತಾಂಶವನ್ನು ತಂದಿದ್ದಾರೆ. ವಿಜೇತರಿಗೆ ಶುಭಾಶಯಗಳು...
15 March 2017
‘ಹಿರಿಮೆ - ಉತ್ಸವ’- 2017
“ವಿದ್ಯಾರ್ಥಿಗಳಲ್ಲಿ ಓದುವ, ಆಡುವ ಅಭ್ಯಾಸ ಕಡಿಮೆಯಾಗುತ್ತಿದೆ. ಶಾಲಾ ದಿನಗಳಲ್ಲಿ ಮಕ್ಕಳ ಮನಸ್ಸು ಸರ್ವಾಂಗೀಣ ವಿಕಾಸ ಹೊಂದಬೇಕು. ಇದಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಹಿರಿಮೆ ಅಂತಹ ಒಂದು ಚಟುವಟಿಕೆ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಬೆಳೆಯಬೇಕಾದ ಶಾಲಾ ದಿನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು.” ಎಂದು ನಮ್ಮ ಶಾಲೆಯ ಮುಖ್ಯೋಪಾಧ್ಯಾಯ ಸಿ.ಎಚ್ ವೆಂಕಟರಾಜ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ‘ಹಿರಿಮೆ - ಉತ್ಸವ’ದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕುಂಬಳೆ ಬಿ.ಆರ್.ಸಿ ಯ ಸೀಮಂತಿನಿ ಟೀಚರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಮತ್ತು ಕುಂಬಳೆ ಬಿ.ಆರ್.ಸಿ ಯ ರೋಜಾ ಟೀಚರ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಶಾಲಾ ಶಿಕ್ಷಕ ತಲೆಂಗಳ ಕೃಷ್ಣಪ್ರಸಾದ ಸ್ವಾಗತಿಸಿದರು. ಶಿಕ್ಷಕ ಅವಿನಾಶ ಕಾರಂತ ಎಂ. ವಂದಿಸಿದರು. ಹಿರಿಯ ಶಿಕ್ಷಕ ಎಚ್.ಶಿವಕುಮಾರ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ವಸ್ತು ಪ್ರದರ್ಶನ ಸಹಿತ ವಿವಿಧ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.
‘ಗಣಿತೋತ್ಸವ’ - 2017
“ಪುರಾತನ ಕಾಲದಿಂದಲೇ ಗಣಿತ ಶಾಸ್ತ್ರದ ಕಡೆಗೆ ಭಾರತವು ಅನನ್ಯವಾದ ಕೊಡುಗೆಯನ್ನು ನೀಡಿದೆ. ಈ ನಿಟ್ಟಿನಲ್ಲಿ ಗಣಿತ ಶಾಸ್ತ್ರದ ಕಡೆಗೆ ವಿದ್ಯಾರ್ಥಿಗಳ ಆಸಕ್ತಿಯನ್ನು ಹೆಚ್ಚಿಸಲು ಶಾಲೆಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಚಟುವಟಿಕೆಗಳು ವಿದ್ಯಾರ್ಥಿಯ ಗಣಿತ ಕೌಶಲವನ್ನು ಹೆಚ್ಚಿಸುತ್ತವೆ” ಎಂದು ಕುಂಬಳೆ ಬಿ.ಆರ್.ಸಿ ಯ ರೋಜಾ ಟೀಚರ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ‘ಗಣಿತೋತ್ಸವ’ದ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ನಮ್ಮ ಶಾಲೆಯ ಮುಖ್ಯೋಪಾಧ್ಯಾಯ ಸಿ.ಎಚ್ ವೆಂಕಟರಾಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಮತ್ತು ಕುಂಬಳೆ ಬಿ.ಆರ್.ಸಿಯ ಸೀಮಂತಿನಿ ಟೀಚರ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಶಾಲಾ ಶಿಕ್ಷಕ ತಲೆಂಗಳ ಕೃಷ್ಣಪ್ರಸಾದ ಸ್ವಾಗತಿಸಿದರು. ಶಿಕ್ಷಕ ಅವಿನಾಶ ಕಾರಂತ ಎಂ. ವಂದಿಸಿದರು. ಹಿರಿಯ ಶಿಕ್ಷಕ ಎಚ್.ಶಿವಕುಮಾರ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ವಸ್ತು ಪ್ರದರ್ಶನ ಸಹಿತ ವಿವಿಧ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.
27 January 2017
ಶಾಲಾ ವಾರ್ಷಿಕೋತ್ಸವ
“ಶಾಲಾ ವಾರ್ಷಿಕೋತ್ಸವಗಳು ನಮ್ಮ ಬಾಲ್ಯದ ನೆನಪನ್ನು ಚಿರಸ್ಮರಣೀಯವಾಗಿ ಉಳಿಸುತ್ತವೆ. ಹಿಂದಿನ ಕಾಲದಲ್ಲಿ ದಿನಪೂರ್ತಿ ಕಾರ್ಯಕ್ರಮಗಳು ಜರಗುತ್ತಿದ್ದವು. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಆಧುನಿಕ ಸಂವಹನ ವ್ಯವಸ್ಥೆಯನ್ನು ಹೆಚ್ಚು ಹೆಚ್ಚು ಬಳಸಲು ಆರಂಭಿಸಿರುವುದು ಸಾಂಸ್ಕೃತಿಕ ವಾತಾವರಣವನ್ನು ಬದಲಾಯಿಸಿದೆ. ಮೊಬೈಲಿನ ಅಧಿಕ ಉಪಯೋಗ ವಿದ್ಯಾರ್ಥಿಗಳಲ್ಲಿ ಓದುವ, ಆಡುವ ಅಭ್ಯಾಸವನ್ನು ಕಡಿಮೆ ಮಾಡಿವೆ. ಈ ಸ್ಠಿತಿ ಖೇದಕರ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಬೆಳೆಯಬೇಕಾದ ಶಾಲಾ ದಿನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸಾಹಿತ್ಯ, ಸಾಂಸ್ಕೃತಿಕ, ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸರ್ವಾಂಗೀಣ ವಿಕಾಸಕ್ಕೆ ಒಳಗಾಗಬೇಕು.” ಎಂದು ಮಧುರೈ ಕಾಮರಾಜ ವಿಶ್ವವಿದ್ಯಾನಿಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ| ಹರಿಕೃಷ್ಣ ಭರಣ್ಯ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರಗಿದ ವರ್ಧಂತ್ಯುತ್ಸವ ಮತ್ತು ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞದ ಅಂಗವಾದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಡಿ.ಶಂಕರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಮತ್ತು ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಚಂದ್ರಹಾಸ ರೈ ಹಾಗೂ ಮಾತೃ ಸಂಘದ ಅಧ್ಯಕ್ಷೆಯರಾದ ಶ್ರೀಮತಿ ವಿಜಯಲಕ್ಷ್ಮಿ ಮತ್ತು ಶ್ರೀಮತಿ ರೇವತಿ ಶುಭಹಾರೈಸಿದರು. ಈ ವರ್ಷ ಸೇವೆಯಿಂದ ನಿವೃತ್ತರಾಗಲಿರುವ ಶಿಕ್ಷಕರಾದ ಎಚ್. ಶಿವಕುಮಾರ, ಮಾಲತಿ.ಎಂ, ವೇಣುಗೋಪಾಲಕೃಷ್ಣ.ಇ ಮತ್ತು ಶಿಕ್ಷಕೇತರ ಸಿಬ್ಬಂದಿ ಗೋಪಾಲ ನಾಯ್ಕ.ಎನ್ ಇವರಿಗೆ ಶಾಲಾ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು.
ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟರಾಜ.ಸಿ.ಎಚ್ ವರದಿ ವಾಚಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ವಂದಿಸಿದರು. ಚಿತ್ರಕಲಾ ಶಿಕ್ಷಕ ಗೋವಿಂದ ಶರ್ಮ ಕೋರಿಕ್ಕಾರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.
25 January 2017
ಜನವರಿ 27 ರಂದು ಶಾಲಾ ವಾರ್ಷಿಕೋತ್ಸವ
ನಮ್ಮ ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕೋತ್ಸವವು 27.01.2017ನೇ ಶುಕ್ರವಾರ ಜರಗಲಿದೆ. ಬೆಳಗ್ಗೆ 9.30ಕ್ಕೆ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಧ್ವಜಾರೋಹಣಗೈಯುವರು. ನಂತರ ಜರಗುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧುರೈ ಕಾಮರಾಜ ವಿಶ್ವವಿದ್ಯಾನಿಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ| ಹರಿಕೃಷ್ಣ ಭರಣ್ಯ ನಿರ್ವಹಿಸಲಿದ್ದಾರೆ. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಡಿ.ಶಂಕರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಅಪ್ಪಣ್ಣ ಸೀತಾಂಗೋಳಿ, ಚಂದ್ರಹಾಸ ರೈ ಹಾಗೂ ಮಾತೃ ಸಂಘದ ಅಧ್ಯಕ್ಷೆಯರಾದ ಶ್ರೀಮತಿ ವಿಜಯಲಕ್ಷ್ಮಿ ಮತ್ತು ಶ್ರೀಮತಿ ರೇವತಿ ಶುಭಾಶಂಸನೆಗೈಯುವರು. ಅಪರಾಹ್ನ 1.30 ರಿಂದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಿದ್ದಾರೆ. ಅದೇ ದಿನ ಸಾಯಂಕಾಲ 4 ಗಂಟೆಗೆ ಮಹಾಜನ ಹಳೆವಿದ್ಯಾರ್ಥಿ ಸಂಘದ ಮಹಾಸಭೆ ಜರಗಲಿದೆ. ಎಲ್ಲರೂ ಬನ್ನಿ...
12 January 2017
15 August 2016
06 August 2016
06 June 2016
01 June 2016
27 April 2016
11 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+
2015-16ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನಮ್ಮ ಶಾಲೆಯ ಹನ್ನೊಂದು ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ. ಈ ಶಾಲೆಯ ಅಕ್ಷತಾ.ಡಿ, ದೀಪಿಕಾ ಕೆ.ಎಸ್, ದೀರೇಶ್.ಕೆ, ಗೌತಮ್ ಎಂ, ಕೃಷ್ಣ ಕುಮಾರ್.ಕೆ, ನಿಸರ್ಗ.ಕೆ, ರಮ್ಯ.ಕೆ, ಶೃತಿ ಮಯ್ಯ.ಕೆ, ಸ್ಮೃತಿ ಇ.ಪಿ, ಸುಷ್ಮಾ.ಕೆ, ವೆಂಕಟೇಶ ಪ್ರಸಾದ ಸಿ.ಎಚ್ ಈ ಸಾಧನೆಯನ್ನು ಪ್ರದರ್ಶಿಸಿದ್ದಾರೆ. ಪ್ರಸ್ತುತ ಶಾಲೆಯಲ್ಲಿ 179 ಮಂದಿ ಪರೀಕ್ಷೆ ಬರೆದಿದ್ದು 178 ಮಂದಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿ ಶಾಲೆಗೆ 99.44% ಫಲಿತಾಂಶವನ್ನು ತಂದಿದ್ದಾರೆ. ವಿಜೇತರಿಗೆ ಶುಭಾಶಯಗಳು...
30 March 2016
``ವಿಮರ್ಶೆ ಇಲ್ಲದೆ ಪ್ರಗತಿ ಇಲ್ಲ: ಕೆ.ವಿ.ತಿರುಮಲೇಶ್"

ವಿದ್ಯಾರ್ಥಿಗಳು ಶಾಲೆಯಲ್ಲಿ ನೀತಿ ಪಾಠಗಳನ್ನು ಕಲಿಯಬೇಕು. ನ್ಯಾಯ ಅನ್ಯಾಯಗಳನ್ನು ಶಾಲೆಯು ಮಗುವಿಗೆ ತಿಳಿಹೇಳುತ್ತದೆ. ಶಾಲೆಗಳಲ್ಲಿ ನೈತಿಕತೆಯನ್ನು ಕಲಿಯುವ ಮೂಲಕ ಮನುಷ್ಯ ನಾಗರಿಕನಾಗುತ್ತಾನೆ. ವಿಜ್ಞಾನ ಮತ್ತು ತತ್ವಜ್ಞಾನಗಳು ವಿರೋಧಾಭಾಸಗಳಲ್ಲ ಎನ್ನುತ್ತಾನೆ ಐನ್‌ಸ್ಟೀನ್. ಈ ಬಗ್ಗೆ ವಿವಿಧ ಕೃತಿಗಳನ್ನು ಅಧ್ಯಯನ ಮಾಡಿ ‘ಜ್ಞಾನ, ವಿಜ್ಞಾನ ಮತ್ತು ತತ್ವಜ್ಞಾನ ಎಂಬ ಅನುವಾದಿತ ಕೃತಿಗೆ ರೂಪುನೀಡುತ್ತಿದ್ದೇನೆ. ಈ ಕೃತಿಯ ಬರವಣಿಗೆಯ ಹೊತ್ತಿನಲ್ಲಿ ತಾಯ್ನೆಲದ ಅನುಭವ ಶ್ರೀಮಂತಿಕೆ ನನ್ನ ಮೇಲೆ ಪ್ರಭಾವ ಬೀರಿದೆ. ಗುರುಗಳಾದ ಎಸ್.ವಿ.ಎಲ್.ಎನ್ ಶರ್ಮ, ಬೊಳುಂಬು ಸುಬ್ರಾಯ ಭಟ್ಟರು ನನ್ನ ಪ್ರೌಢ ಶಿಕ್ಷಣದ ಹಂತದಲ್ಲಿ ನನ್ನ ಮೇಲೆ ಪ್ರಭಾವ ಬೀರಿದವರಲ್ಲಿ ಪ್ರಮುಖರು. ಅಧ್ಯಾಪಕರು ಶಾಲೆಯ ಆತ್ಮ, ಮನ:ಸಾಕ್ಷಿ ಇದ್ದ ಹಾಗೆ ಇರಬೇಕಾದವರು. ಶಾಲೆಗಳಲ್ಲಿ ಹಿಂಸೆ ನೀಡುವ ಶಿಕ್ಷೆಗಳನ್ನು ನೀಡಬಾರದು. ಶಿಕ್ಷಣಕ್ಕೆ ಸಮೀಪದ ಶಿಕ್ಷೆ ಇರಬೇಕು. ಅಲ್ಲಿ ಸಂವಾದ ಜರಗಬೇಕು, ವಾಗ್ವಾದವಲ್ಲ. ವಿಮರ್ಶೆ ಇಲ್ಲದೆ ಪ್ರಗತಿ ಇಲ್ಲ. ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಗಳಾದ ನಂತರ ಶುಚಿತ್ವದ ಬಗ್ಗೆ ಕಾಳಜಿ ಹೆಚ್ಚಾಗಿದೆ. ನನಗೆ ದೊರೆತ ಈ ಪ್ರಶಸ್ತಿಯ ಮೊತ್ತವೂ ಸಾಮಾಜಿಕ ಕಾರ್ಯಕ್ಕೆ ಬಳಕೆಯಾಗಲಿ. ಎಂದು ಪ್ರಸಿದ್ಧ ಸಾಹಿತಿ, ಶಿಕ್ಷಣ ತಜ್ಞ ಕೆ.ವಿ. ತಿರುಮಲೇಶ್ ಅಭಿಪ್ರಾಯಪಟ್ಟರು. ಅವರು ತಮಗೆ ದೊರೆತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಮೊತ್ತವಾದ ರೂಪಾಯಿ ಒಂದು ಲಕ್ಷವನ್ನು ತಾವು ಪ್ರೌಢ ಶಿಕ್ಷಣವನ್ನು ಪೂರೈಸಿದ ನಮ್ಮ ವಿದ್ಯಾಸಂಸ್ಥೆಗೆ ಸಮರ್ಪಿಸಿ ಮಾತನಾಡುತ್ತಿದ್ದರು.
ಇಂದು ನಮ್ಮ ಶಾಲೆಯಲ್ಲಿ ಜರಗಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ವಹಿಸಿದರು. ಈ ಸಂದರ್ಭದಲ್ಲಿ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಪಡಿಯಡ್ಪು ಶಂಕರ ಭಟ್ಟರು ಕೆ.ವಿ.ತಿರುಮಲೇಶರನ್ನು ಅಭಿನಂದಿಸಿದರು. ಚಿತ್ರ ಕಲಾವಿದ ಪಿ.ಎಸ್.ಪುಣಿಂಚಿತ್ತಾಯ, ಐತಪ್ಪ ಮುಳಿಯಾರು, ಗೋಪಾಲಕೃಷ್ಣ ಶಾಸ್ತ್ರಿ, ಡಾ|ಹರಿಕೃಷ್ಣ ಭರಣ್ಯ, ಡಾ|ಮಹೇಶ್ವರಿ.ಯು, ವಿ.ಬಿ.ಕುಳಮರ್ವ ಶುಭ ಹಾರೈಸಿದರು.
ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ.ಸುಬ್ರಾಯ ಭಟ್ಟರನ್ನು ಕೆ.ವಿ.ತಿರುಮಲೇಶ್ ಕುಟುಂಬಿಕರು ಗೌರವಿಸಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಶೈಲಜ.ಬಿ ಪ್ರಾರ್ಥಿಸಿದರು.
28 March 2016
ಸಾಹಿತಿ ಕೆ.ವಿ.ತಿರುಮಲೇಶ್ ಇವರಿಂದ ಗೌರವ ಸಮರ್ಪಣೆ
ಪ್ರಸಿದ್ಧ ಸಾಹಿತಿ, ಶಿಕ್ಷಣ ತಜ್ಞ ಕೆ.ವಿ. ತಿರುಮಲೇಶ್ ತಮಗೆ ದೊರೆತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಮೊತ್ತವನ್ನು ತಾವು ಪ್ರೌಢ ಶಿಕ್ಷಣವನ್ನು ಪೂರೈಸಿದ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗೆ ಸಮರ್ಪಿಸಲಿದ್ದಾರೆ. 30.03.2016 ಬುಧವಾರ ಅಪರಾಹ್ನ 4 ಗಂಟೆಗೆ ನಮ್ಮ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಪಡಿಯಡ್ಪು ಶಂಕರ ಭಟ್ಟರು ಕೆ.ವಿ.ತಿರುಮಲೇಶರನ್ನು ಅಭಿನಂದಿಸಲಿದ್ದಾರೆ. ಶಾಲಾ ಹಳೆ ವಿದ್ಯಾರ್ಥಿ, ಚಿತ್ರ ಕಲಾವಿದ ಪಿ.ಎಸ್.ಪುಣಿಂಚಿತ್ತಾಯ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಮತ್ತು ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಶುಭ ಹಾರೈಸಲಿದ್ದಾರೆ.
Subscribe to:
Posts (Atom)




















